ನವದೆಹಲಿ, ಮೇ 25 (DaijiworldNews/SM): ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಎನ್ಐಎ ಕೋರ್ಟ್ ನಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಿ ಮೇ 25ರ ಬುಧವಾರ ತೀರ್ಪು ನೀಡಿದೆ.
ಮೇ 19ರಂದು ಯಾಸಿನ್ ಮಲಿಕ್ ತಪ್ಪಿತಸ್ಥ ಎಂದು ದೆಹಲಿಯ ಎನ್ಐಎ ಕೋರ್ಟ್ ತೀರ್ಪು ನೀಡಿತ್ತು. ಆದರೆ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದೆ. ಉಗ್ರರಿಗೆ ಆರ್ಥಿಕ ನೆರವು ನೀಡಿದ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.
ಇದಕ್ಕು ಮುನ್ನ ಯಾಸಿನ್ ಮಲಿಕ್ಗೆ ಮರಣದಂಡನೆ ವಿಧಿಸುವಂತೆ ರಾಷ್ಟ್ರೀಯ ತನಿಖಾ ಆಯೋಗ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ಮಧ್ಯೆ, ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಬಿಡುತ್ತಿದ್ದೇನೆ ಎಂದು ಮಲಿಕ್ ನ್ಯಾಯಾಧೀಶರಿಗೆ ತಿಳಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಅಂತಿಮವಾಗಿ ಜೀವಾವಧಿ ಶಿಕ್ಷೆ ನೀಡಿದೆ.