ತುಮಕೂರು, ಮೇ 26 (DaijiworldNews/DB): ತುಮಕೂರು ಜಿಲ್ಲೆ ಊರ್ಡಿಗೆರೆಯಲ್ಲಿ ವಿದ್ಯಾರ್ಥಿಯೋರ್ವ ಇಂಗ್ಲಿಷ್ ಕಲಿಕೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಬಾಲಕ ಊರ್ಡಿಗೆರೆ ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ. ಶಾಲೆಯಲ್ಲಿ ಇಂಗ್ಲಿಷ್ ಕಲಿಕೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಬಾಲಕ ಶಾಲೆಗೆ ಹೋಗುವುದಿಲ್ಲ ಎಂಬುದಾಗಿ ಹಠ ಹಿಡಿಯುತ್ತಿದ್ದ. ಆದರೆ ಹೆತ್ತವರು ಶಾಲೆಗೆ ಹೋಗುವಂತೆ ಗದರಿದ್ದಾರೆ.
ಇದರಿಂದ ಬೇಸರಗೊಂಡ ಆತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ತತ್ಕ್ಷಣ ಹೆತ್ತವರು ಬಾಲಕನನ್ನು ಸನಿಹದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821