ಕೊಚ್ಚಿ, ಮೇ 26 (DaijiworldNews/DB): ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷ ತೊರೆದಿರುವುದರಿಂದ ಯಾವುದೇ ನಷ್ಟವಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿದೆ. ಕಾಂಗ್ರೆಸ್ಗೆ ಬೇರೆ ಪಕ್ಷಗಳಿಂದ ಬರುವವರಿಗೂ ಇದು ತೊಂದರೆಯಾಗುವುದಿಲ್ಲ. ಅವರು ಪಕ್ಷದಿಂದ ಹೊರ ಹೋಗಿರುವ ಬಗ್ಗೆ ನಮಗೆ ಯಾವುದೇ ನಷ್ಟವಿಲ್ಲ ಎಂದರು.
ರಾಜ್ಯಸಭಾ ಸದಸ್ಯ ಸ್ಥಾನಕ್ಕಾಗಿ ಅವರು ಕಾಂಗ್ರೆಸ್ ತೊರೆದಿದ್ದಾರೆ. ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ, ಅವಕಾಶವಾಗಿ ಸಿಗದ ಕಾರಣ ಹೀಗೆ ಮಾಡಿದ್ದಾರೆಯೇ ಹೊರತು ಕಾಂಗ್ರೆಸ್ ಸಿದ್ದಾಂತದ ಬಗ್ಗೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಏನೂ ಮಾತನಾಡಿಲ್ಲ ಎಂದರು.