ಬೆಂಗಳೂರು,ಮೇ 26 (DaijiworldNews/MS): ರಾಜ್ಯ ರಾಜಧಾನಿಯ ಬನಶಂಕರಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸೊಂದು ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹಿಂಬದಿಯಿಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿಹೊಡೆದ ಪರಿಣಾಮ ಹಾರೋಹಳ್ಳಿ ನಿವಾಸಿ ಕೀರ್ತನಾ (16) ಸಾವನಪ್ಪಿದ್ದಾರೆ.
ಬಾಲಕಿ ಸ್ನೇಹಿತರಾದ ಹರ್ಷಿತಾ, ದರ್ಶನ್ ಜತೆ ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ