ಬೆಂಗಳೂರು, ಮೇ 25 (DaijiworldNews/HR): ಇಡಿಯಿಂದ ಈಗಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿ, ಜಾಮೀನಿನ ಮೇಲೆ ಹೊರಗಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದು, ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.
ಇಡಿ ದಾಳಿ 2019ರಲ್ಲಿ ನಡೆದಿದ್ದು, ಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿತ್ತು. ಈ ಪ್ರಕರಣರದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ,
ಇನ್ನು ಈ ಪ್ರಕರಣದಲ್ಲಿಯೇ ಈಗ ಇಡಿ ಅಧಿಕಾರಿಗಳು ದೆಹಲಿಯಲ್ಲಿನ ಇಡಿ ವಿಶೇಷ ಕೋರ್ಟ್ ಗೆ ಮತ್ತೆ ಹೊಸದಾಗಿ ಎರಡೂವರೆ ವರ್ಷದ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.