ಕಾರ್ಗಿಲ್, ಮೇ 25 (DaijiworldNews/HR): ರಸ್ತೆಯಿಂದ ಆಯತಪ್ಪಿ ಆಳವಾದ ಕಮರಿಗೆ ಟವೆರಾ ಕಾರು ಬಿದ್ದ ಪರಿಣಾಮ ವಾಹನದಲ್ಲಿದ್ದ 7ರಿಂದ 8 ಮಂದಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಜೊಜಿಲಾ ಪಾಸ್ನಲ್ಲಿ ನಡೆದಿದೆ.
ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಕಂದಕವು 400-500 ಅಡಿಗಳಷ್ಟು ಆಳವಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ 8 ಮಂದಿ ಸಾವನ್ನಪ್ಪಿರುವ ಶಂಕೆಗಳಿವೆ ಎಂದು ತಿಳಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.