ಕಾರವಾರ, ಮೇ 26 (DaijiworldNews/SM): ಮುಂಬರುವ ಚುನಾವಣೆಗಳಲ್ಲಿ ಯಾವುದೇ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆ ಅಥವಾ 2023ರ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಹೇಳಿದ್ದಾರೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳಿಗೂ ಮತಗಳ ಕೊರತೆ ಇರುವಂತೆಯೇ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮತ್ತೊಂದೆಡೆ ತಾನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯ ರಾಜಕೀಯದಲ್ಲಿಯೇ ಸಕ್ರಿಯರಾಗಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.