ಶಿವಮೊಗ್ಗ, ಮೇ 27 (DaijiworldNews/HR): ಮತ್ತೆ ಹಿಜಾಬ್ ಸಮಸ್ಯೆ ಸೃಷ್ಟಿಸುವ ಕೆಲಸವನ್ನು ಕೆಲವರು ರಾಜ್ಯದಲ್ಲಿ ಮಾಡುತ್ತಿದ್ದು, ಕೆಲವು ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರ ಮನಸ್ಥಿತಿ ಹಾಗೇ ಇರುವುದರಿಂದ ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಂಗಳೂರಿನಲ್ಲಿ ಮತ್ತೆ ನಡೆದ ಹಿಜಾಬ್ ವಿವಾದದ ಕುರಿತು ಮಾತನಾಡಿದ ಅವರು, ನೀವು ಭಾರತದ ಸಂಸ್ಕೃತಿಗೆ ತಕ್ಕಂತೆ ಹೊಂದಾಣಿಕೆಯಾಗಬೇಕು. ಆಗದಿದ್ದರೆ ಯಾವ ಕಾರಣಕ್ಕೂ ನಾವು ಒಪ್ಪುವುದಿಲ್ಲ ಎಂದರು.
ಇನ್ನು ಕೋರ್ಟ್, ಸಂವಿಧಾನ, ಸರ್ಕಾರ ಹಾಗೂ ಸರ್ಕಾರದ ಕಾನೂನಿಗೆ ಬೆಲೆ ಕೊಡಬೇಕು. ಮುಸಲ್ಮಾನರು ದೇಶದ ಕಾನೂನು ವಿರುದ್ಧವಾಗಿ ಇರುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಇರಬೇಕಾದರೇ ಕಾನೂನು, ಸಂವಿಧಾನಕ್ಕೆ ಬೆಲೆ ಕೊಡಲೇಬೇಕು ಎಂದು ಹೇಳಿದ್ದಾರೆ.