ಬೆಂಗಳೂರು, ಮೇ 27 (DaijiworldNews/DB): ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆನಡೆದಿದ್ದು, ನಿರೀಕ್ಷೆಯಂತೆ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್ಗೆ ಎರಡು, ಜೆಡಿಎಸ್ಗೆ ಒಂದು ಸ್ಥಾನ ಲಭಿಸಿದೆ. ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವಪ್ರಸಾದ್ ಬಿಜೆಪಿಯಿಂದ, ನಾಗರಾಜ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಕಾಂಗ್ರೆಸ್ನಿಂದ ಹಾಗೂ ಟಿ.ಎ. ಶರವಣ ಜೆಡಿಎಸ್ನಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದಾರೆ. ವಿಶೇಷವೆಂದರೆ ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದ್ದ ಇಂದೇ ಅವಿರೋಧ ಆಯ್ಕೆ ನಡೆದಿದೆ. ಏಳು ಸ್ಥಾನಗಳಿಗೆ ಏಳು ಮಂದಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಚುನಾವಣೆ ಇರಲಿಲ್ಲ.
ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಈ ಕಾರಣದಿಂದಾಗಿ ಹೆಚ್ಚುವರಿ ಅಭ್ಯರ್ಥಿಗಳು ಯಾವುದೇ ಪಕ್ಷದಿಂದ ಕಣಕ್ಕಿಳಿಯಲಿಲ್ಲ.