ಬೆಂಗಳೂರು, ಮೇ 27 (DaijiworldNews/SM): ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐ.ಎ.ಎಸ್. ಅಧಿಕಾರಿ ವಂದಿತಾ ಶರ್ಮ ಅವರನ್ನು ಸರಕಾರ ನೇಮಕ ಮಾಡಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರು ಇದೇ ಮೇ 31ಕ್ಕೆ ನಿವೃತ್ತಿಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ವಂದಿತಾ ಶರ್ಮ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಂದಿತಾ ಶರ್ಮ ಅವರು 1986ರ ಬ್ಯಾಚಿನ ಕರ್ನಾಟಕ ಕೇಡರ್ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ಜಿಲ್ಲಾಧಿಕಾರಿಯಾಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಪ್ರಸ್ತುತ ಅಪರ ಮುಖ್ಯ ಕಾರ್ಯದರ್ಶಿ, ಮುಖ್ಯ ಅಭಿವೃದ್ಧಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.