ನವದೆಹಲಿ, ಮೇ 28 (DaijiworldNews/DB): ದೆಹಲಿಯ ರಣಹುಲಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ಶರ್ಮಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪೇಪರ್ ರೋಲ್ಗಳು, ಕರ್ಟನ್, ಯಂತ್ರಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಅವಘಡದ ಮಾಹಿತಿ ತಿಳಿದ ತತ್ಕ್ಷಣ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ನಾಲ್ಕು ತಾಸು ಬೇಕಾಯಿತು. ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ.