ಆಂಧ್ರಪ್ರದೇಶ, ಮೇ 28 (DaijiworldNews/DB): ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮನೆಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅನಂತಪುರದ ಮುಳಕಲೇಡು ಗ್ರಾಮದ ನಿವಾಸದಲ್ಲಿ ಘಟನೆ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳ ಗೋಡೆ ಕುಸಿದಿದೆ. ನಾಲ್ವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅನಂತಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಫಕೀರಪ್ಪ ತಿಳಿಸಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿರುವುದಾಗಿ ವರದಿಯಾಗಿದೆ.