ಜಮ್ಮು, ಮೇ 28 (DaijiworldNews/DB): ಮಿನಿ ಬಸ್ ಸೇತುವೆಯಿಂದ ಕೆಳಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ತಾವಿ ಸೇತುವೆಯಿಂದ ಮಿನಿ ಬಸ್ ಕೆಳಗೆ ಉರುಳಿದೆ. ಈ ಬಸ್ ಮೆಟಾಡೋರ್ ಸೇತುವೆಯ ಮೂಲಕ ಹಾದು ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇತರ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಡಾಖ್ನಲ್ಲಿ ಸೇನಾ ವಾಹನ ಶ್ಯೋಕ್ ನದಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ಯೋಧರು ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಿನ್ನೆಯಷ್ಟೇ ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ನದಿಗೆ ಮಿನಿ ಬಸ್ ಉರುಳಿ ಬಿದ್ದು ಮತ್ತೊಂದು ದುರ್ಘಟನೆ ನಂಭವಿಸಿದೆ.