ಹುಬ್ಬಳ್ಳಿ, ಮೇ 28 (DaijiworldNews/HR): ಎಸ್ಡಿಪಿಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದ್ದು, ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಡಿಪಿಐ, ಪಿಎಫ್ಐ ಇವು ಕಾಂಗ್ರೆಸ್, ಕಮ್ಯೂನಿಸ್ಟರು ಬೆಳೆಸಿದ ಕೂಸು. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ ಕೇಸ್ ಗಳನ್ನು ವಜಾ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಆರ್ಎಸ್ಎಸ್ ಮೂಲ ಪ್ರಶ್ನಿಸಿರುವ ಸಿದ್ದರಾಮಯ್ಯ ಹೇಳಿಕೆ ಕುರಿತಾಗಿ ಮಾತನಾಡಿದ ಅವರು, ಆರ್ಎಸ್ಎಸ್ ಮೂಲ, ಬಿಜೆಪಿ ಮೂಲವನ್ನು ಕೇಳುವ ಸಿದ್ದರಾಮಯ್ಯನವರ ಮೂಲವನ್ನೇ ಜನ ಕಿತ್ತುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.