ಶ್ರೀನಗರ, ಮೇ 28 (DaijiworldNews/HR): ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಯೋತ್ಪಾದಕರು ಹತರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದಿದೆ.
ಉಗ್ರರು ಬಿಜ್ಬೆಹಾರಾದ ಶಿಟಿಪೊರಾ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಇನ್ನು ಹತ್ಯೆಯಾದ ಉಗ್ರರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.