ಥಾಣೆ, ಮೇ 29 (DaijiworldNews/DB): ಥಾಣೆಯ ಫ್ಯಾಕ್ಟರಿಯೊಂದರಲ್ಲಿ ಶನಿವಾರ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಉಂಟಾಗಿಲ್ಲ.
ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿ ಇದಾಗಿದ್ದು, ಗ್ಯಾಸ್ ಸಿಲಿಂಡರ್ಗಳನ್ನು ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು, ಬಳಿಕ ಫ್ಯಾಕ್ಟರಿಯ ಇತರ ಘಟಕಗಳಿಗೂ ಹಬ್ಬಿದೆ. ಸಿಲಿಂಡರ್ಗೆ ಬೆಂಕಿ ತಾಗಿ ಸ್ಪೋಟಗೊಂಡಿದೆ. ಸ್ಪೋಟದಿಂದ ಉಂಟಾದ ಶಬ್ದಕ್ಕೆ ಹೆದರಿ ಅಕ್ಕಪಕ್ಕದ ಮನೆಯವರು ಓಡಿ ಹೊರ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಥಾಣೆ ನಗರ ಪಾಲಿಕೆಯ ಅಧಿಕಾರಿ ಅವಿನಾಶ್ ಸಾವಂತ್ ತಿಳಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದೆ. ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.