ಬೆಂಗಳೂರು, ಮೇ 29 (DaijiworldNews/HR): ನಟ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಚಂದ್ರು ಅವರನ್ನು ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಪ್ರಮೇಯವೇ ಇಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಜನಸೇವೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಅಂದಿನಿಂದ ಪ್ರಾಮಾಣಿಕ ಕೆಲಸ ಮಾಡಿದ ತೃಪ್ತಿಯಿದೆ ಎಂದು ಚಂದ್ರು ಪತ್ರದಲ್ಲಿ ಹೇಳಿದ್ದಾರೆ
ಮುಖ್ಯಮಂತ್ರಿ ಚಂದ್ರು ಅವರು ಮೊದಲಿಗೆ ಬಿಜೆಪಿಯಲ್ಲಿದ್ದು, ಆ ಬಳಿಕ 2014ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು.