ಲಕ್ನೋ, ಮೇ 29 (DaijiworldNews/HR): ಉತ್ತರ ಪ್ರದೇಶದ ಬಹ್ರೈಚ್- ಲಖಿಂಪುರ ಖೇರಿ ಹೆದ್ದಾರಿಯಲ್ಲಿ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 12 ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಮೃತರನ್ನು ಶಿವಕುಮಾರ ಪೂಜಾರಿ (28), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಎಂದು ಗುರುತಿಸಲಾಗಿದೆ.
ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.