ಕೇರಳ, ಮೇ 29 (DaijiworldNews/HR): ಖ್ಯಾತ ಹಿನ್ನೆಲೆ ಗಾಯಕ ಎದವ ಬಶೀರ್ ಅವರು ವೇದಿಕೆ ಮೇಲೆ ಹಾಡುತ್ತಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದ ಅಲಪೂಝಾದಲ್ಲಿನ ಬ್ಲ್ಯೂ ಡೈಮಂಡ್ಸ್ ಆರ್ಕೆಸ್ಟ್ರಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ರಾತ್ರಿ ಎದವ ಬಶೀರ್ ಹಾಡುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ.
ಇನ್ನು ಈ ವಿಷಯ ತಿಳಿದು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ನೆಚ್ಚಿನ ಗಾಯಕನ ಅಕಾಲಿಕ ಸಾವಿನಿಂದ ದುಃಖತಪ್ತರಾಗಿದ್ದೇವೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.