ಬೆಂಗಳೂರು, ಮೇ 30 (DaijiworldNews/MS): ಜೂನ್ 2 ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳು ಮತ್ತು ಕರಾವಳಿ ಜಿಲ್ಲೆಗಳಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾನ್ಸೂನ್ ವಾಡಿಕೆಗಿಂತ ಮೂರು ದಿನ ಮುಂಚಿತವಾಗಿ ಅಂದರೆ ಮೇ 29 ರಂದು ಕೇರಳವನ್ನು ಪ್ರವೇಶಿಸಿದೆ. ಸಾಮಾನ್ಯವಾಗಿ ಮಾನ್ಸೂನ್ ಕೇರಳ ಪ್ರವೇಶಿಸಿದ ಮೂರರಿಂದ ನಾಲ್ಕು ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತದೆ ಎಂದು ಬೆಂಗಳೂರು ಕೇಂದ್ರದ ಹವಾಮಾನ ಇಲಾಖೆಯ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.
ಮೇ 29 ರಂದು ಕೇರಳದ ೧೪ ಕೇಂದ್ರಗಳಿಗೆ ಮುಂಗಾರು ಪ್ರವೇಶಿಸಿದೆ. ಆದ್ದರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಬೆಂಗಳೂರು ನಗರದ ದಕ್ಷಿಣ ಒಳಭಾಗಗಳು, ಗ್ರಾಮಾಂತರ, ರಾಮನಗರ, ಚಾಮರಾಜನಗರ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂನ್ ೨ ರಂದು ರಾತ್ರಿ ಜೂ ೩ ರಂದು ಮಳೆಯಾಗುವ ಸಾಧ್ಯತೆಯಿದೆ.