ಪತ್ತನಂತಿಟ್ಟ, ಮೇ 30 (DaijiworldNews/HR): ಕೇರಳದ ಅಂಬಾಲಪುಳದಲ್ಲಿ ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡ ವೃದ್ದೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ಪೊಲೀಸರು ಆರೋಪಿ ಥೋಪುಂಪಡಿ ನಿವಾಸಿ ಸುನೀಶ್ ಅಲಿಯಾಸ್ ಅಪ್ಪು (22) ಎಂಬಾತನನ್ನುಬಂಧಿಸಿದ್ದಾರೆ.
ಆರೋಪಿಯು ಮೇ 25ರಂದು ಕಾಂಪೌಂಡ್ ಗೋಡೆಯನ್ನು ಹತ್ತಿ ಮನೆಯ ಆವರಣಕ್ಕೆ ನುಗ್ಗಿ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಇನ್ನು ಅತ್ಯಾಚಾರಕ್ಕೆ ಒಳಗಾದ ಬಳಿಕ ಗಂಭೀರ ಗಾಯಗೊಂಡಿದ್ದ ವೃದ್ಧೆಯನ್ನು ಸಂಬಂಧಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ನರ್ಸ್ ಬಳಿ ನಡೆದ ಎಲ್ಲ ಘಟನೆಯನ್ನು ವೃದ್ಧೆ ವಿವರಿಸಿದ್ದು, ಹೆಚ್ಚಿನ ಚಿಕಿತ್ಸೆಗೆಂದು ಪೆರುಮಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಘಟನೆ ನಡೆದ ಮೂರು ದಿನಗಳ ನಂತರ ಕೊನೆಯುಸಿರೆಳೆದಿದ್ದಾರೆ.
ಸಾವಿಗೆ ನಿಖರವಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರವೇ ದೃಢಪಡಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.