ಬೆಂಗಳೂರು,ಮೇ 30 (DaijiworldNews/HR): ಬಿಜೆಪಿ ಮತ್ತು ಜೆಡಿಎಸ್ ಒಳ ಮೈತ್ರಿ ತಡೆಯಲು ಕಾಂಗ್ರೆಸ್ನಿಂದ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ಕಣಕ್ಕಿಳಿಸಲಾಗಿದ್ದು, ಈಗಾಗಲೇ ಕಾಂಗ್ರೆಸ್ ನಿಂದ ಮೊದಲ ಅಭ್ಯರ್ಥಿಯಾಗಿ ಜೈರಾಂ ರಮೇಶ್ ಗೆ ಟಿಕೆಟ್ ನೀಡಿದ ಬೆನ್ನಲ್ಲೇ, 2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಕಣಕ್ಕೆ ಇಳಿಸಿದೆ.
ಜೆಡಿಎಸ್- ಕಾಂಗ್ರೆಸ್ ಮಧ್ಯೆ ನಡೆಯಬಹುದಾದ ಒಳಮೈತ್ರಿಯನ್ನು ತಡೆಯಲು ವಿಪಕ್ಷ ನಾಯಕ ಸಿದ್ದರಾಮಯ್ಯ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಲಹೆಯನ್ನು ವರಿಷ್ಠರಿಗೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶಾಕ್ ನೀಡಿದ್ದಾರೆ.
ಇನ್ನು ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಫಾರ್ಮ್ ಪಡೆದಿದ್ದ ಕುಪ್ಪೇಂದ್ರ ರೆಡ್ಡಿ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಹೆಚ್ಚುವರಿ ಮತವನ್ನು ತಮಗೆ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಡಿಕೆ ಒಪ್ಪಿಗೆ ಸೂಚಿಸಿದ್ದರು ಎನ್ನಲಾಗಿದೆ. ಈ ಮಾಹಿತಿ ಲಭಿಸುತ್ತಿದ್ದಂತೆ ಸಿದ್ದರಾಮಯ್ಯ ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದು ಟ್ವೀಟ್ ಮಾಡಿದ್ದರು.