ಬೆಂಗಳೂರು, ಮೇ 30 (DaijiworldNews/DB): ರೈತ ಮುಖಂಡ ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಖಂಡನೀಯ. ಇದು ರಾಜ್ಯದ ರೈತರಿಗೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಟಿಕಾಯತ್ಗೆ ರಕ್ಷಣೆ ನೀಡಬೇಕಿತ್ತು. ಆದರೆ ಸರ್ಕಾರ ಅವರಿಗೆ ರಕ್ಷಣೆ ನೀಡಲು ವಿಫಲವಾಗಿದೆ ಎಂದರು.
ಭ್ರಷ್ಟಾಚಾರ ಪ್ರಕರಣದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ರಾಕೇಶ್ ಟಿಕಾಯತ್ ಮತ್ತು ಯಧವೀರ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದರು. ಈ ವೇಳೆ ಕೆಲವರು ಗೋಷ್ಠಿಯಲ್ಲೇ ಅವರೊಂದಿಗೆ ವಾಗ್ವಾದ ನಡೆಸಿ ಕಪ್ಪು ಮಸಿ ಎರಚಿದರು. ಅಲ್ಲದೆ ಕುರ್ಚಿಗಳನ್ನು ಚೆಲ್ಲಾಪಿಲ್ಲಿ ಎಸೆದ ಘಟನೆ ನಡೆದಿದೆ.