ಶ್ರೀನಗರ, ಮೇ 31 (DaijiworldNews/DB): ಹಿಂದೂ ಶಿಕ್ಷಕಿ ಮೇಲೆಬಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಶಿಕ್ಷಕಿ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದಿದೆ.
ಮೃತ ಶಿಕ್ಷಕಿಯನ್ನು ಕುಲ್ಗಾಮ್ ನಿವಾಸಿ ರಜನಿ ಭಲ್ಲ ಎಂದು ಗುರುತಿಸಲಾಗಿದೆ. ಭಯೋತ್ಪಾದಕರ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಶಿಕ್ಷಕಿಯನ್ನು ತತ್ಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಕುಲ್ಗಾಮ್ನ ಗೋಪಾಲ್ಪೊರ ಪ್ರೌಢಶಾಲೆಯ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಭಯೋತ್ಪಾದಕರ ದಾಳಿ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಸರ್ಕಾರಿ ಉದ್ಯೋಗಿ ರಾಹುಲ್ ಭಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಇದೀಗ ಗುಂಡಿನ ದಾಳಿಗೆ ಶಿಕ್ಷಕಿ ಬಲಿಯಾಗಿದ್ದಾರೆ.