ಗುಜರಾತ್, ಮೇ 31 (DaijiworldNews/DB): ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದನ್ನು ಸುದ್ದಿ ಸಂಸ್ಥೆಯೊಂದಕ್ಕೆ ಖಚಿತಪಡಿಸಿದ್ದಾರೆ.
ಕಾಂಗ್ರೆಸ್ನಲ್ಲಿ ತಮ್ಮನ್ನುಅವಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಹಾರ್ದಿಕ್ ಬಳಿಕ ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್ ಬಗ್ಗೆ ಅವರು ಅಸಮಾಧಾನ ತೋಡಿಕೊಂಡಿದ್ದ ಬೆನ್ನಲ್ಲೇ ಹಾರ್ದಿಕ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು. ಇದೀಗ ಅದು ಖಚಿತವಾಗಿದೆ. ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.