ಶಿವಮೊಗ್ಗ, ಮೇ 31 (DaijiworldNews/MS): ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಬಹುಕೋಟಿ ಲಂಚ ಆರೋಪ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಲಾಗಿದೆ.
ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು ಅವರ ಸ್ಥಾನಕ್ಕೆ ಹೆಚ್.ಆರ್. ಬಸವರಾಜಪ್ಪ ಅವರನ್ನು ನೇಮಿಸಲಾಗಿದೆ.
ರಾಜ್ಯದಲ್ಲಿ ಕಳೆದ ವರ್ಷ ನಡೆದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯುವ ಸಲುವಾಗಿ 35 ಕೋಟಿ ರೂ. ಲಂಚ ಪಡೆದು ನೌಕರರಿಗೆ ಮತ್ತು ರೈತ ಸಮುದಾಯಕ್ಕೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ತನಿಖೆ ಆಗುವವರೆಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದೆವು. ಆದರೆ ಅವರು ನೀಡದ ಕಾರಣ ನಾವು ವಜಾ ಮಾಡುತ್ತೇವೆ ಎಂದು ರೈತ ಸಂಘ ಹೇಳಿದೆ.
ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರೈತರು ಘೋಷಣೆ ಕೂಗಿದ್ದಾರೆ ಎಂದು ತಿಳಿದುಬಂದಿದೆ.