ಶ್ರೀನಗರ, ಮೇ 31 (DaijiworldNews/DB): ಜಮ್ಮು- ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಮಂಗಳವಾರ ಹಾಜರಾದರು.
ರಾಜ್ ಬಾಗ್ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ವಿಚಾರಣೆ ನಡೆಸಲಾಯಿತು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಯುವವರೆಗೂ ಇಂತಹ ತೊಂದರೆಗಳನ್ನು ನೀಡುತ್ತಲೇ ಇರುತ್ತಾರೆ. ಸಮನ್ಸ್ ಬಗ್ಗೆ ಹೆಚ್ಚೇನೂ ಮಾತನಾಡಲಾರೆ. ಇಡಿ ವಿಚಾರಣೆಯಲ್ಲಿ ಸಹಕರಿಸಲಾಗುವುದು ಎಂದರು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 27 ರಂದುಇಡಿಯಿಂದ ಅವರಿಗೆ ನೊಟೀಸ್ ಜಾರಿಯಾಗಿತ್ತು.