ನವದೆಹಲಿ, ಮೇ 31 (DaijiworldNews/HR): ಇಡಿ ಅಧಿಕಾರಿಗಳು ಕೆಲ ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎರಡೂವರೆ ವರ್ಷದ ಬಳಿಕ ಕೋಎಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ ಮತ್ತೆ ಡಿಕೆಶಿ ಸಂಕಷ್ಟ ಎದುರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಡಿಕೆ ಶಿವಕುಮಾರ್ ಬಿಡುಗಡೆಯಾಗಿ ಬಂದಿದ್ದರು. ಇದೇ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಎರಡೂವರೆ ವರ್ಷಗಳ ಬಳಿಕ ಇಡಿ ಅಧಿಕಾರಿಗಳು ಕೋರ್ಟ್ ಗೆ ಡಿಕೆ ಶಿವಕುಮಾರ್ ವಿರುದ್ಧದ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಇನ್ನು ಇದೀಗ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧದ ವಿಚಾರಣೆಗಾಗಿ ಜುಲೈ 1, 2022ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಡಿಕೆ ಶಿವಕುಮಾರ್ ಸಹಿತ ಐವರಿಗೆ ಸಮನ್ಸ್ ಜಾರಿಗೊಳಿಸಿದೆ.