ಹಾನಗಲ್, ಜೂ 01 (DaijiworldNews/MS): ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಆರೋಪಿಗಳನ್ನು ಪರಶುರಾಮ ಮಡಿವಾಳರ ಮತ್ತು ಯಶವಂತ ಎಂದು ಗುರುತಿಸಲಾಗಿದೆ.
ಹದಿನೆಂಟು ವರ್ಷದ ವಿಶೇಷ ಚೇತನ ಯುವತಿಯ ಬಾಯಿಗೆ ಬಟ್ಟೆ ತುರುಕಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಆರೋಪಿ ಯಶವಂತಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ ಮಾಡಲು ಪರಶುರಾಮಗೆ ಯಶವಂತ ಸಹಕಾರ ನೀಡಿದ್ದಾನೆ ಎನ್ನಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.