ಬೆಂಗಳೂರು, ಜೂ 01 (DaijiworldNews/SM): ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ ಎನ್ ಎಸ್ ಯುಐ ಕಾರ್ಯಕರ್ತರು ದಾಂಧಲೆ ನಡೆಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀಕ್ಷ್ಣವಾಗಿ ಖಂಡಿಸಿದ್ದಾರೆ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.
ಇಂತಹ ಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿರುವ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.