ತಿಪಟೂರು, ಜೂ 02 (DaijiworldNews/MS): ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಖಂಡಿಸಿ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ - ಎನ್ಎಸ್ಯುಐ(ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಕಾರ್ಯಕರ್ತರು ಬುಧವಾರ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿ 15 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬುಧವಾರದಂದು ಸುಮಾರು 20-30 ಮಂದಿ ಸಚಿವರಿಗೆ ಧಿಕ್ಕಾರ ಕೂಗುತ್ತಾ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಆರ್ ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣದ ಪಾಠವನ್ನು ಸೇರಿಸಿ ಶಾಲಾ ಪಠ್ಯಪುಸ್ತಕಗಳಿಗೆ ಕೇಸರಿ ಬಣ್ಣ ಬಳಿದಿರುವ ಚಕ್ರತೀರ್ಥ ಅವರನ್ನು ವಜಾಗೊಳಿಸಬೇಕು ಮತ್ತು ಪುಸ್ತಕಗಳಲ್ಲಿನ ವಿಷಯವನ್ನು ಬದಲಾಯಿಸಬೇಕು ಎಂದು ಎನ್ಎಸ್ ಯುಐ ಕಾರ್ಯಕರ್ತರು ಸರ್ಕಾರಕ್ಕೆ ಒತ್ತಾಯಿಸಿದ್ದರು.
ತಕ್ಷಣ ಮನೆಯಲ್ಲಿದ್ದವರು ಪೊಲೀಸರಿಗೆ ಪೋನ್ ಮಾಡಿ ಮಾಹಿತಿ ನೀಡಿದ್ದರು. ಬಳಿಕ ಧಾವಿಸಿದ ಪೊಲೀಸರು ೧೦ -೧೫ ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಗ್ರಾಮೀನ ಪೊಲೀಸ್ ಠಾಣೆಗೆ ಕರೆದುಕೊಂಡು ಕೆಲವರು ತಪ್ಪಿಸಿಕೊಂಡು ಓಡಿ ಹೋಗಿದ್ದಾರ ಎಂದು ತಿಳಿದುಬಂದಿದೆ.