ಬೆಂಗಳೂರು, ಜೂ 02 (DaijiworldNews/MS): ಜೂನ್ ಕೊನೆ ವಾರದಲ್ಲಿ ಅಂದರೆ 28ರೊಳಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸುವ ಸಾಧ್ಯತೆ ಇದೆ.
ಮೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 28ರೊಳಗೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಈ ಹಿಂದೆ ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿತ್ತು. ವಿಜ್ಞಾನ ಮೌಲ್ಯ ಮಾಪನ ತಡವಾಗುವ ಹಿನ್ನಲೆಯಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ ವಿಳಂಬವಾಗಬಹುದು ಎನ್ನಲಾಗಿತ್ತು. ಆದರೆ ಸದ್ಯ ನಿರೀಕ್ಷೆಯಂತೆ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆದ್ದು, ಮೌಲ್ಯಮಾಪನ ತಡವಾದರೆ ಮಾತ್ರ ಜೂನ್ 4ನೇ ವಾರದಲ್ಲಿ ಅಂದರೆ ಜೂನ್ 24 ರಿಂದ 28ರೊಳಗೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸುವುದಾಗಿ ಸ್ಪಷ್ಟ ಪಡಿಸಿದ್ದಾರೆ.