ನವದೆಹಲಿ, ಜೂ 02 (DaijiworldNews/MS): ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, ಕಳೆದ ವಾರದಿಂದ ಸೋನಿಯಾ ಗಾಂಧಿ ಅವರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಬುಧವಾರ ಸಂಜೆ, ಅವರು ಜ್ವರದಿಂದ ಬಳಲುತ್ತಿದ್ದು ಕೋವಿಡ್ ಪರೀಕ್ಷೆ ನಡೆಸಿದ್ದು ಸೋಂಕು ದೃಢಪಟ್ಟಿದೆ. ಅವರು ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು , ತಮ್ಮನ್ನು ತಾವು ಪ್ರತ್ಯೇಕಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ
ವೈದ್ಯಕೀಯ ಪರೀಕ್ಷೆಗಳು ನಡೆದಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಸೋನಿಯಾ ಗಾಂಧಿ ಭೇಟಿಯಾದ ಅನೇಕ ನಾಯಕರು ಮತ್ತು ಕಾರ್ಯಕರ್ತರು ಕೊರೊನಾ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸುರ್ಜೇವಾಲಾ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಯಾಗಿದ್ದು ಅವರು ಜೂನ್ 8 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗಬೇಕಿತ್ತು.