ನವದೆಹಲಿ, ಜೂ 02 (DaijiworldNews/SM): ಕಾಶ್ಮೀರದಲ್ಲಿ ಹಿಂದೂಗಳನ್ನ ಗುರಿಯಾಗಿಸಿಕೊಂಡು ಸರಣಿ ಹತ್ಯೆಗಳು ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.
ಅಜಿತ್ ದೋವಲ್ ಅವರನ್ನು ಭೇಟಿಯಾದ ಅಮಿತ್ ಶಾ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳ ಕುರಿತು ಚರ್ಚಿಸಿದರು. ಪ್ರಧಾನಿ ಕಾರ್ಯಾಲಯದ ಕೇಂದ್ರದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡರು.
ಮೂರು ದಿನಗಳಲ್ಲಿ ಕಣಿವೆಯಲ್ಲಿ ಹಿಂದೂಗಳ ಮೇಲಿನ ಎರಡನೇ ಉದ್ದೇಶಿತ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರಿಂದ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಬಳಿಕ ತುರ್ತು ಸಭೆ ನಡೆಸಲಾಗ್ತಿದೆ.