ಕಲಬುರಗಿ, ಜೂ 03 (DaijiworldNews/HR): ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಹೊರವಲಯದ ಹೆದ್ದಾರಿಯಲ್ಲಿ ನಡೆದಿದೆ.
ಖಾಸಗಿ ಬಸ್ ಗೋವಾದಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಇನ್ನು ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.