ನವದೆಹಲಿ, ಜೂ 03 (DaijiworldNews/HR): ಗುರುವಾರವಷ್ಟೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಇದೀಗ ಪ್ರಿಯಾಂಗಾ ಗಾಂಧಿ ವಾದ್ರಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗೂ ಸಣ್ಣ ಮಟ್ಟದ ಕೋವಿಡ್ ಲಕ್ಷಣಗಳಿದ್ದ ಕಾರಣ ಪರೀಕ್ಷೆಗೆ ಒಳಪಟ್ಟಿದ್ದೆ. ಅದರ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದಿದ್ದಾರೆ.
ಇನ್ನು ಕೊರೊನಾ ದೃಢಪಟ್ಟಿರುವುದರಿಂದ ನಾನು ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ.