ಬೆಂಗಳೂರು,ಜೂ 03 (DaijiworldNews/HR): ಬೆಂಗಳೂರಿನಲ್ಲಿ ನಡೆಯುತ್ತಿರುವ ನವಚೈತನ್ಯ ಶಿಬಿರದಲ್ಲಿಯೂ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸೂತ್ರ ಚರ್ಚೆಗೆ ಬಂದಿದ್ದು, ಈ ಸೂತ್ರವೇ ಅಂತಿಮವಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪಕ್ಷದಲ್ಲಿ ನಾಯಕರ ಕುಟುಂಬಗಳು ಅಥವಾ ಸಂಬಂಧಿಗಳಿಗೆ ಟಿಕೆಟ್ ನೀಡುವ ವಿಚಾರವಾಗಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಒಂದು ಕುಟುಂಬದಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡುವುದೇ ಇಲ್ಲ ಎಂದಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.
ಇನ್ನು ಕುಟುಂಬದಲ್ಲಿ ಮತ್ತೊಬ್ಬರೂ ಪಕ್ಷಕ್ಕಾಗಿ 5 ವರ್ಷಗಳ ಕಾಲ ದುಡಿದಿದ್ದರೆ ಅವರಿಗೆ ಅವಕಾಶ ನೀಡಲಾಗುವುದು ಎಂದು ಪಕ್ಷದ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.
ಪಕ್ಷದ ಖಾಲಿ ಹುದ್ದೆಗಳ ಭರ್ತಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಲಾಗಿದ್ದು, ಮುಂದಿನ 15 ದಿನದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪೂರ್ಣಗೊಳ್ಳಬೇಕು. 3 ರಿಂದ 6 ತಿಂಗಳೊಳಗೆ ಪ್ರತಿಯೊಂದು ಸಮಿತಿಗೂ ಪೂರ್ಣ ಪ್ರಮಾಣದಲ್ಲಿ ಪದಾಧಿಕಾರಿಗಳು ನೇಮಕವಾಗಿರಬೇಕು ಎಂದು ಸೂಚನೆ ನೀಡಿದ್ದಾರೆ.