ನವದೆಹಲಿ. 03 (DaijiworldNews/DB): ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ.ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರದಲ್ಲಿಯೇ ಖರೀದಿ ಮಾಡಬೇಕು. ಕೊರೊನಾ ಶುರುವಾದಂದಿನಿಂದಲೂ ಈ ಕ್ರಮ ಬಳಕೆಯಲ್ಲಿದೆ. ಮುಂದೆಯೂ ಅದೇ ರೀತಿ ಮುಂದುವರಿಯಲಿದೆ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಸಬ್ಸಿಡಿ ನೀಡಲಾಗುತ್ತಿತ್ತಾದರೂ, ಅದು ದುರುಪಯೋಗವಾಗುತ್ತಿರುವ ವಿಚಾರ ಗೊತ್ತಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಸಬ್ಸಿಡಿ ಹಾಕಿ ದುರುಪಯೋಗ ತಡೆಗೆ ಸರ್ಕಾರ ಕ್ರಮ ಕೈಗೊಂಡಿತ್ತು. ಆದರೆ ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಬ್ಸಿಡಿ ಮುಂದುವರಿಯಲಿದೆ. ಆದರೆ ಎಲ್ಲರಿಗೂ ಅದನ್ನು ನೀಡಲು ಸಾಧ್ಯವಿಲ್ಲ ಎಂದವರು ತಿಳಿಸಿದ್ದಾರೆ.