ಆಂಧ್ರಪ್ರದೇಶ, 03 (DaijiworldNews/DB): ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪೋರಸ್ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣ ಘಟಿಸಿತ್ತು. ಈ ದುರಂತ ಮಾಸುವ ಮುನ್ನವೇ ಇನ್ನೊಂದು ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.