ಬೆಂಗಳೂರು, ಜೂ 03 (DaijiworldNews/MS): "ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಮರಳೋದಿಲ್ಲ" ಎಂದು ಹೇಳುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಲವು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಶೋಭಾ ಕರಂದ್ಲಾಜೆ ಸಿಎಂ ಆಗುತ್ತಾರೆಯೇ? ಅಥವಾ ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದು , ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಮತ್ತೆ ರಾಜ್ಯ ರಾಜಕೀಯಕ್ಕೆ ವಾಪಸ್ ಬರೋದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕೃಷಿ ಇಲಾಖೆ ಜವಾಬ್ದಾರಿ ಕೊಟ್ಟಿದ್ದಾರೆ. ಇದರೊಂದಿಗೆ ನನಗೆ ಅನೇಕ ರಾಜ್ಯಗಳಲ್ಲಿ ಚುನಾವಣೆ ಉಸ್ತುವಾರಿಯನ್ನು ನೀಡಿದ್ದಾರೆ. ನಾನು ನನಗೆ ಸಿಕ್ಕ ಜವಾಬ್ದಾರಿಗಳಿಂದ ಖುಷಿಯಾಗಿ ಇದ್ದೇನೆ ಎಂದು ಹೇಳಿದ್ದಾರೆ.
"ನಾನು ರಾಜ್ಯಕ್ಕೆ ವಾಪಸ್ ಬರುತ್ತೇನೆ ಎಂಬ ಕುರಿತು ಯಾವುದೇ ಚರ್ಚೆಯೇ ಆಗಿಲ್ಲ. ಅದರೂ ಇದೊಂದು ಆಧಾರವಿಲ್ಲದ ಚರ್ಚೆ ಪಕ್ಷ ನನಗೆ ಜವಾಬ್ದಾರಿ ಕೊಟ್ಟಿದೆ. ಅದನ್ನ ನಿಭಾಯಿಸಿಕೊಂಡು ಹೋಗುತ್ತೇನೆ. ರಾಜ್ಯಕ್ಕೆ ಮತ್ತೆ ವಾಪಸ್ ಆಗೋದಿಲ್ಲ" ಎಂದು ಸ್ಪಷ್ಟಪಡಿಸಿದರು.