ಶ್ರೀನಗರ, ಜೂ 04 (DaijiworldNews/HR): ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರಿಗೆ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಗಾಯಗೊಂಡಿರುವ ಕಾರ್ಮಿಕರನ್ನು ಆಸೊಅತ್ರೆಗೆ ದಾಖಲಿಸಿದ್ದಾರೆ.
ಇನ್ನು ಭಯೋತ್ಪಾದಕರಿಂದ ಹತ್ಯೆ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ.
300 ಹಿಂದೂ ಕುಟುಂಬಗಳ ಪೈಕಿ ಅರ್ಧದಷ್ಟು ಜನರು ಬಾರಾಮುಲ್ಲಾದ ಕಾಶ್ಮೀರಿ ಪಂಡಿತ್ ಕಾಲೊನಿ ತೊರೆದಿದ್ದಾರೆ.