ತುಮಕೂರು, ಜೂ 04 (DaijiworldNews/HR): ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇನ್ನು ಇದೇ ಅಪಘಾತದ ಸ್ಥಳದಲ್ಲಿ ಮತ್ತೊಂದು ಬುಲೆಟ್ ದ್ವಿಚಕ್ರ ಪತ್ತೆಯಾಗಿದ್ದು, ಬೈಕ್ ಸವಾರನ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ವರದಿಯಾಗಿದೆ.
ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.