ಕೇರಳ, ಜೂ 04 (DaijiworldNews/HR): ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯಿಂದೆಸೆಯಲ್ಪಟ್ಟು ಟ್ರಾನ್ಸ್ ಫಾರ್ಮರ್ನಲ್ಲಿ ಸಿಲುಕಿಕೊಂಡ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಕಟ್ಟಪ್ಪನ ಎಂಬಲ್ಲಿ ನಡೆದಿದೆ.
ಅಪಘಾತಕ್ಕೀಡಾಗಿ ರಸ್ತೆಯಿಂದ ಎಸೆಯಲ್ಪಟ್ಟ ಬೈಕ್ ಟ್ರಾನ್ಸ್ ಫಾರ್ಮರ್ ಗಾರ್ಡ್ ನೊಳಗೆ ಸಿಲುಕಿಕೊಂಡಿದ್ದು, ಬೈಕ್ ಸವಾರ ಪವಾಡ ಸದೃಶವಾಗಿ ಪಾರಾಗಿದ್ದಾನೆ.
ಇನ್ನು ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.