ಹಾಪೂರ್, ಜೂ 04 (DaijiworldNews/HR): ಉತ್ತರ ಪ್ರದೇಶದ ಹಾಪೂರ್ ಜಿಲ್ಲೆಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟು, 15ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ದೊಲಾನಾದ ಯುಪಿಎಸ್ ಐಡಿಸಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಈ ಸ್ಪೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಕಾರ್ಖಾನೆ ಸುತ್ತಮುತ್ತಲಿನ ಕೆಲ ಕಾರ್ಖಾನೆಗಳ ಮೇಲ್ಫಾವಣಿಗೆ ಹಾನಿಯಾಗಿದೆ.
ಇನ್ನು ಕನಿಷ್ಠ 9 ಮಂದಿ ಮೃತಪಟ್ಟು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೀರತ್ ವಲಯದ ಐಜಿಪಿ ಪ್ರವೀಣ್ ಕುಮಾರ್ ಹೇಳಿದ್ದಾರೆ.