ಬೆಂಗಳೂರು, ಜೂ 04 (DaijiworldNews/HR): ರಾಜ್ಯಸಭೆ ಚುನಾವಣೆ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರು ಯಾರೊಂದಿಗೂ ಯಾವುದೇ ಸಂಧಾನ ಮಾತುಕತೆ ನಡೆಸಿಲ್ಲ. ಆದರೆ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಒಂದು ದಿನ ದಿಲ್ಲಿಗೆ ಹೋಗಿ ಬಂದರು. ಚಿಂತನ ಶಿಬಿರದಂತೆ ಅಲ್ಲಿಯೂ ಇಂದು ಸಭೆ ಇತ್ತು. ಅದನ್ನು ಬಿಟ್ಟು ಅವರು ಯಾರೊಂದಿಗೂ ಸಮಾಲೋಚನೆ ನಡೆಸಿಲ್ಲ ಎಂದರು.
ಇನ್ನು ಎರಡನೇ ಅಭ್ಯರ್ಥಿಯನ್ನು ರಾಜ್ಯಸಭೆ ಚುನಾವಣೆ ಕಣಕ್ಕೆ ಇಳಿಸಿರುವುದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ತೀರ್ಮಾನ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ನಾನು ಹಾಗೂ ಮತ್ತಿತರರು ಮುಖಂಡರು ಚರ್ಚೆ ಮಾಡಿ, ಪಕ್ಷದ ಹಿತದೃಷ್ಟಿಯಿಂದ ಎರಡನೇ ಅಭ್ಯರ್ಥಿ ಹೆಸರನ್ನು ಹೈಕಮಾಂಡ್ಗೆ ಕಳುಹಿಸಿ ಕೊಟ್ಟಿದ್ದೆದ್ದು, ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ತಿಳಿಸಿದ್ದಾರೆ.