ಬೆಂಗಳೂರು, ಜೂ 04 (DaijiworldNews/HR): ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಯಲದಲ್ಲಿ ಇನ್ವಿನ್ಸಿಯಾ -2022 ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮ ಮೇ. 27, 28ರಂದು ನಡೆದಿದ್ದು, ಇದರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜು ಚಾಂಪಿಯನ್ಸ್ ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.
ಈ ಕಾರ್ಯಕ್ರಮವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದ್ದು, ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ 50 ತಂಡ ಮತ್ತು ವೈಯಕ್ತಿಕ ಈವೆಂಟ್ ಗಳಲ್ಲಿ 90ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಂದ 2,100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇನ್ನು ಎರಡನೇ ದಿನದ ಕಾರ್ಯಕ್ರಮವನ್ನು ಜಾವೇದ್ ಅಲಿ ಉದ್ಘಾಟಿಸಿದ್ದು, ಮೇಡಂ ಚಾನ್ಸೆಲರ್ ಕೌಸರ್ ಅಹಮದ್ ಅವರು ಇನ್ವಿನ್ಸಿಯಾ -2022ರ ಸಮಗ್ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿಗೆ ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜು ರನ್ನರ್ ಅಪ್ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.