ಗುವಾಹಟಿ, ಜೂ 05 (DaijiworldNews/HR): ವಂಚನೆ ಆರೋಪದ ಮೇಲೆ ಇತ್ತೀಚೆಗಷ್ಟೆ ತನ್ನ ನಿಶ್ಚಿತ ವರನನ್ನು ಬಂಧಿಸಿ ಸುದ್ದಿಯಾಗಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರನ್ನು ಭ್ರಷ್ಟಾಚಾರ ಆರೋಪದಲ್ಲಿ ಬಂಧಿಸಲಾಗಿದೆ.
ಪ್ರಸ್ತುತ ನಾಗಾಂವ್ ಜಿಲ್ಲೆಯ ಕಲಿಯಾಬೋರ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ (ಎಸ್ಐ) ಆಗಿ ಸೇವೆ ಸಲ್ಲಿಸುತ್ತಿರುವ ರಭಾ ಅವರನ್ನು ಭ್ರಷ್ಟಾಚಾರ ಆರೋಪದ ಮೇಲೆ ವಿಚಾರಣೆಯ ಬಳಿಕ ಬಂಧಿಸಲಾಗಿದೆ.
ಇನ್ನು ರಭಾ ಇಬ್ಬರು ಗುತ್ತಿಗೆದಾರರು ಹಾಗೂ ತಮ್ಮ ಮಾಜಿ ಗೆಳೆಯ ರಾಣಾ ಪೊಗಾಗ್ ಅವರೊಂದಿಗೆ ಹಣಕಾಸಿನ ವ್ಯವಹಾರಗಳನ್ನು ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ನ್ಯಾಯಾಲಯವು ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ .