ಹೈದರಾಬಾದ್, ಜೂ 05 (DaijiworldNews/HR): ಹೈದರಾಬಾದ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕಾರಿನೊಳಗೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿ ಬಂಧಿಸಲಾಗಿದ್ದು, 5ನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಕಾರಿನಲ್ಲಿ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಅಪ್ರಾಪ್ತರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಇನ್ನು ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿಯನ್ನು ಭಾನುವಾರ ವಶಕ್ಕೆ ಪಡೆಯಲಾಗಿದೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.
ಪಬ್ನಲ್ಲಿ ಯುವತಿ ಪರಿಚಯ ಮಾಡಿಕೊಂಡ ಆರೋಪಿಗಳು, ಆಕೆಯನ್ನು ಮನೆಗೆ ಡ್ರಾಪ್ ಮಾಡುವ ಭರವಸೆ ನೀಡಿ ಕಾರು ಹತ್ತಿಸಿಕೊಂಡಿದ್ದು, ಅಲ್ಲಿಂದ ನಿರ್ಜನ ಪ್ರದೇಶಕ್ಕೆ ಬಂದಾಗ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.