ಮುಂಬೈ, ಜೂ 05 (DaijiworldNews/HR): ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ತಾವು ಹೋಮ್ ಐಸೋಲೇಷನ್ನಲ್ಲಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ವೈದ್ಯರ ಸಲಹೆಯಂತೆ ಔಷಧಿ ಮತ್ತು ಚಿಕಿತ್ಸೆಯನ್ನು ತೆಗೆದುಕೊಳ್ಳುವುದು. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಇನ್ನು ಈ ಹಿಂದೆ 2020 ರ ಅಕ್ಟೋಬರ್ನಲ್ಲಿ ಫಡ್ನವೀಸ್ಗೆ ವೈರಸ್ ಸೋಂಕು ತಗುಲಿತ್ತು. ನಂತರ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.