ಜಮ್ಮು-ಕಾಶ್ಮೀರ, ಜೂ. 05 (DaijiworldNews/DB): ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನೊಬ್ಬನನ್ನು ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಾಗಸೇನಿ ತಹಸಿಲ್ನ ರಾಶ್ಗ್ವಾರಿ ನಿವಾಸಿ ತಾಲಿಬ್ ಹುಸೇನ್ ಬಂಧಿತ ಭಯೋತ್ಪಾದಕ. 2016 ರಲ್ಲಿ ಉಗ್ರಗಾಮಿ ಸಂಘಟನೆ ಸೇರಿದ್ದ ಈತ ಕಳೆದ ಆರು ವರ್ಷಗಳಿಂದ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಈತ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಉಗ್ರ ಸಂಘಟನೆಗಳಿಗೆ ಯುವಕರನ್ನು ಸೆಳೆದು ಸೇರಿಸಿಕೊಳ್ಳುವ ಕಾಯಕದಲ್ಲಿ ಈತ ಸಕ್ರಿಯನಾಗಿ ತೊಡಗಿಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಕಿಶ್ತ್ವಾರ್ ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಈತನ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.